Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:28 - ಕನ್ನಡ ಸತ್ಯವೇದವು C.L. Bible (BSI)

28 ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಅನಿ ಕಪ್ಡ್ಯಾಂಚ್ಯಾ ವಿಶಯಾತ್ ತುಮಿ ಕಶ್ಯಾಕ್ ಯವಜ್ತ್ಯಾಶಿ? ಬಗಾ ತಿ ಶೆತಾತ್ಲಿ ಫುಲ್ಲಾ ತಿ ಕಸೆ ಉಗಾವ್ತ್ಯಾತ್; ತಿ ಕಾಮ್ ಕರಿನ್ಯಾತ್, ನಾ ಅಪ್ನಾಸಾಟ್ನಿ ಕಪ್ಡೆ ತಯಾರ್ ಕರಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:28
13 ತಿಳಿವುಗಳ ಹೋಲಿಕೆ  

“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.


ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.


“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?


ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು