Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:32 - ಕನ್ನಡ ಸತ್ಯವೇದವು C.L. Bible (BSI)

32 ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಹೆ ಸಗ್ಳೆ ದೆವಾಕ್ ವಳ್ಕುನಸಲ್ಲಿ ಲೊಕಾ ಯವಜ್ತಲೆ. ಹೆ ಸಗ್ಳೆ ತುಮ್ಕಾ ಪಾಜೆ ಮನುನ್ ಸರ್‍ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:32
12 ತಿಳಿವುಗಳ ಹೋಲಿಕೆ  

ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.


ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.


ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು