Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:5 - ಕನ್ನಡ ಸತ್ಯವೇದವು C.L. Bible (BSI)

5 “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ತುಮಿ ಮಾಗ್ನಿ ಕರ್‍ತಾನಾ, ಕುಸ್ಡ್ಯಾ ಲೊಕಾಂಚ್ಯಾ ಸರ್ಕೆ ಕರುನಕಾಸಿ! ಸಗ್ಳ್ಯಾ ಲೊಕಾನಿ ಬಗಿ ಸರ್ಕೆ ಸಿನಾಗೊಗಾತ್ನಿ, ಅನಿ ವನಿಯಾತ್ನಿ ಇಬೆ ರ್‍ಹವ್ನ್ ಮಾಗ್ನಿ ಕರುಕ್ ತೆಂಕಾ ಲೈ ಕುಶಿ. ಮಿಯಾ ಖರೆಚ್ ಸಾಂಗ್ತಾ, ತೆಂಚೆ ಭೊಮಾನ್ ತೆಂಕಾ ಅದ್ದಿಚ್ ಗಾವುನ್ ಹೊಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:5
34 ತಿಳಿವುಗಳ ಹೋಲಿಕೆ  

ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,


ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


“ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ.


ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಎನ್ನರಸನೇ, ದೇವನೇ I ಮಾಡುವೆ ನಿನಗೆ ಪ್ರಾರ್ಥನೆ I ನೀ ಆಲಿಸೆನ್ನ ಯಾಚನೆ II


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ,


ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


“ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು