Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:13 - ಕನ್ನಡ ಸತ್ಯವೇದವು C.L. Bible (BSI)

13 “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಬಾರಿಕ್ಲ್ಯಾ ದಾರಾತ್ನಾ ಭುತ್ತುರ್ ಜಾಂವಾ, ಕಶ್ಯಾಕ್ ಮಟ್ಲ್ಯಾರ್ ನರ್ಕಾಕ್ ಜಾತಲೆ ದಾರ್ ಲೈ ರುಂದ್ ಥೈ ಜಾತಲೊ ರಸ್ತೊಬಿ ಲೈ ಸಸಾರಾಚೊ, ಅನಿ ಲೈ ಜಾನಾ ತ್ಯಾ ರಸ್ತ್ಯಾನ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:13
38 ತಿಳಿವುಗಳ ಹೋಲಿಕೆ  

ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.


ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು