Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:14 - ಕನ್ನಡ ಸತ್ಯವೇದವು C.L. Bible (BSI)

14 ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಮರಾನ್ ನಸಲ್ಲ್ಯಾ ಜಿವನಾಕ್ ಜಾತಲೆ ದಾರ್ ಲೈ ಬಾರಿಕ್, ಅನಿ ತಿ ವಾಟ್ ಲೈ ತರಾಸಾಚಿ, ಅನಿ ಖಾಲಿ ಉಲ್ಲ್ಯಾಸ್ಯಾಚ್ ಲೊಕಾಕ್ನಿ ತಿ ವಾಟ್ ಗಾವ್ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:14
27 ತಿಳಿವುಗಳ ಹೋಲಿಕೆ  

“ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು