Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:20 - ಕನ್ನಡ ಸತ್ಯವೇದವು C.L. Bible (BSI)

20 ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೀಗಿರಲಾಗಿ ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಅವರವರ ಫಲಗಳಿಂದಲೇ ನೀವು ಅವರನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಚೆಸಾಟ್ನಿ ತೆಂಚ್ಯಾ ಚಲ್ನುಕಿ ವೈನಾಚ್ ತೆನಿ ಝುಟೆ ಪ್ರವಾದಿ ಮನುನ್ ತುಮಿ ವಳಕ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:20
5 ತಿಳಿವುಗಳ ಹೋಲಿಕೆ  

ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?


ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ.


ಅಂಜೂರದ ಮರ ಓಲಿವ್ ಹಣ್ಣನ್ನು ಕೊಡುವುದುಂಟೇ? ದ್ರಾಕ್ಷಿಯ ಬಳ್ಳಿಯಲ್ಲಿ ಅಂಜೂರ ಸಿಕ್ಕೀತೇ? ಎಂದಿಗೂ ಇಲ್ಲ. ಅಂತೆಯೇ ಸೌಳು ನೀರಿನ ಒರತೆಯಿಂದ ಸಿಹಿ ನೀರು ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು