Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:24 - ಕನ್ನಡ ಸತ್ಯವೇದವು C.L. Bible (BSI)

24 “ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚ್ಯಾ ಸರ್ಕೆ ಚಲ್ತಾ ತೊ ಗುಂಡ್ಯಾ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಶಾನ್ಯಾ ಮಾನ್ಸಾ ಸರ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:24
41 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ I ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ II


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.


ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.


ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.


ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.


ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.


ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು