Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:5 - ಕನ್ನಡ ಸತ್ಯವೇದವು C.L. Bible (BSI)

5 ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ; ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿಂದ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕುಸ್ಡ್ಯಾ! ಅದ್ದಿ ತುಜ್ಯಾ ಡೊಳ್ಯಾತ್ ಹೊತ್ತೊ ನಾಕ್ಡಾಚೊ ತುಕ್ಡೊ ಕಾಡುನ್ ಘೆ, ಮಾನಾ ತುಜ್ಯಾ ಭಾವಾಚ್ಯಾ ಡೊಳ್ಯಾತ್ಲೊ ಬಾರಿಕ್ಲೊ ಕಚ್ರೊ ತುಕಾ ಬರೊ ದಿಸ್ತಾ, ತನ್ನಾ ತಿಯಾ ತೊ ಕಾಡುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:5
11 ತಿಳಿವುಗಳ ಹೋಲಿಕೆ  

ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.


ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?


ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?


ಆದರೆ ಆ ದೆವ್ವ ಅವರಿಗೆ, “ಯೇಸು ನನಗೆ ಗೊತ್ತು, ಪೌಲನನ್ನು ನಾನು ಬಲ್ಲೆ; ಆದರೆ ನೀವು ಯಾರು?” ಎಂದು ಪ್ರಶ್ನಿಸಿತು.


ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?


ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು