Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:6 - ಕನ್ನಡ ಸತ್ಯವೇದವು C.L. Bible (BSI)

6 “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆ ಕಾಯ್ ಪವಿತ್ರ್ ಹಾಯ್, ತೆ ಕುತ್ತ್ಯಾಂಚ್ಯಾ ಫಿಡ್ಯಾತ್ ದಿವ್‍ನಕಾಶಿ, ತಿ ಪರ್ತುನ್ ತುಮ್ಕಾ ಚಾವುಕ್ ಫಾಟ್ ಲಾಗ್ತ್ಯಾತ್, ತುಮ್ಚಿ ಮೊತಿಯಾ ಡುಕ್ರಾಂಚ್ಯಾ ಫಿಡ್ಯಾತ್ ಟಾಕುನಕಾಶಿ. ತಿ ತೆಂಕಾ ಪಾಯಾತ್ನಿ ಘಾಲುನ್ ತುಡ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:6
18 ತಿಳಿವುಗಳ ಹೋಲಿಕೆ  

ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ.


ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಅದಕ್ಕೆ ಯೇಸು, “ಮಕ್ಕಳ ಆಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


“ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.


ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.


ಲಜ್ಜೆಗೆಟ್ಟು ನಡೆಯುವ ಸೌಂದರ್ಯವತಿ; ಹಂದಿಯ ಮೂತಿಗೆ ಚಿನ್ನದ ಮೂಗುತಿ.


ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಮೂಢನ ಪ್ರಶ್ನೆಗೆ ಉತ್ತರಕೊಡಬೇಡ; ಮೂರ್ಖನಂತೆ ಕೊಟ್ಟರೆ ನೀನೂ ಆದಿಯೇ ಅವನಂತೆ.


ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು