Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:8 - ಕನ್ನಡ ಸತ್ಯವೇದವು C.L. Bible (BSI)

8 ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾಗ್ತಲೆ ಸಗ್ಳೆ ಜಾನಾ ಘೆತ್ಯಾತ್, ಜೊ ಕೊನ್ ಹುಡಕ್ತಾ ತೆಕಾ ಗಾವ್ತಾ, ಅನಿ ಜೆ ಕೊನ್ ದಾರ್ ಬಡ್ವುತಾ ತೆಕಾ ದಾರ್ ಉಗಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:8
13 ತಿಳಿವುಗಳ ಹೋಲಿಕೆ  

“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II


ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?


ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು