Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಬೆಟ್ಟದಿಂದಿಳಿದು ಬರುವಾಗ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಬೆಟ್ಟದಿಂದ ಕೆಳಗೆ ಇಳಿದು ಬಂದನು. ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಪರ್ವತವನ್ನು ಇಳಿದು ಬಂದಾಗ, ಜನರು ದೊಡ್ಡ ಸಮೂಹವಾಗಿ ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಮಡ್ಡಿ ವೈನಾ ಉತ್ರುನ್ ಯೆಲ್ಲ್ಯಾ ತನ್ನಾ, ಲೊಕಾಂಚೆ ಮೊಟೆ-ಮೊಟೆ ತಾಂಡೆ ತೆಚ್ಯಾ ಫಾಟ್ನಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:1
12 ತಿಳಿವುಗಳ ಹೋಲಿಕೆ  

ದೊಡ್ಡ ಜನಸಮೂಹ ತಮ್ಮ ಸುತ್ತಲೂ ನಿಂತಿರುವುದನ್ನು ಯೇಸುಸ್ವಾಮಿ ನೋಡಿದರು. ಸರೋವರದ ಆಚೆಯ ದಡಕ್ಕೆ ಹೋಗಲು ತಮ್ಮ ಶಿಷ್ಯರಿಗೆ ಅಪ್ಪಣೆಮಾಡಿದರು.


ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.


ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.


ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.


ಅವರೆಲ್ಲರೂ ಜೆರಿಕೊ ಪಟ್ಟಣವನ್ನು ಬಿಟ್ಟು ಹೊರಟರು. ಜನರ ದೊಡ್ಡ ಗುಂಪು ಯೇಸುಸ್ವಾಮಿಯನ್ನು ಹಿಂಬಾಲಿಸಿತು.


ದೊಡ್ಡ ಜನಸ್ತೋಮ ಅವರನ್ನು ಹಿಂಬಾಲಿಸಿತು. ಅಲ್ಲಿ ಯೇಸು ಅವರಿಗೆ ಆರೋಗ್ಯದಾನ ಮಾಡಿದರು.


ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರು, ಕುರುಡರು, ಮೂಕರು, ಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗುಣಪಡಿಸಿದರು.


ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.


ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು