Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:10 - ಕನ್ನಡ ಸತ್ಯವೇದವು C.L. Bible (BSI)

10 ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆ ಆಯ್ಕುನ್ ಜೆಜುಕ್ ಅಜಿಪ್ ದಿಸ್ಲೆ, ಅನಿ ಅಪ್ನಾಚ್ಯಾ ಫಾಟ್ನಾ ಹೊತ್ತ್ಯಾ ಲೊಕಾಕ್ನಿ ಜೆಜುನ್ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಇಸ್ರಾಯೆಲಾತ್ ಎವ್ಡೊ ಮೊಟೊ ವಿಶ್ವಾಸ್ ಹೊತ್ತೊ ಮಾನುಸ್ ಮಾಕಾ ಖೈಬಿ ಗಾವುಕ್ ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:10
9 ತಿಳಿವುಗಳ ಹೋಲಿಕೆ  

ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.


ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.


ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.


ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಜೋಸೆಫನು ತನ್ನ ಅಣ್ಣತಮ್ಮಂದಿರನ್ನು, ಹಿರಿಯವನು ಮೊದಲ್ಗೊಂಡು ಕಿರಿಯವನವರೆಗೂ, ಅವರವರ ಮಯಸ್ಸಿನ ಪ್ರಕಾರ ಕುಳ್ಳಿರಿಸಿದ್ದನು. ಇದನ್ನು ಗಮನಿಸಿದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.


ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು