Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:11 - ಕನ್ನಡ ಸತ್ಯವೇದವು C.L. Bible (BSI)

11 ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ನಿಮಗೆ ಹೇಳುವದೇನಂದರೆ ಮೂಡಣ ಪಡುವಣ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಎಂಬವರ ಸಂಗಡ ಊಟಕ್ಕೆ ಕೂಡ್ರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಖರೆಚ್ ಸಾಂಗ್ತಾ, ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಅನಿ ದಿಸ್ ಬುಡ್ತಲ್ಯಾ ದಿಕ್ಕಾಕ್ನಾ ಲೈ ಲೊಕಾ ಯೆತ್ಯಾತ್ ಅನಿ ಸರ್‍ಗಾಚ್ಯಾ ರಾಜಾತ್ ಅಬ್ರಾಹಾಮಾಚ್ಯಾ, ಇಸಾಕಾಚ್ಯಾ ಅನಿ ಜಾಕೊಬಾಚ್ಯಾ ವಾಂಗ್ಡಾ ಸನಾಚ್ಯಾ ಜೆವ್ನಾಕ್ ಬಸ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:11
40 ತಿಳಿವುಗಳ ಹೋಲಿಕೆ  

ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ಅಷೇರನ ಕುಲದಿಂದ ಹನ್ನೆರಡು ಸಾವಿರ ನೆಫ್ತಲೀಮನ ಕುಲದಿಂದ ಹನ್ನೆರಡು ಸಾವಿರ ಮನಸ್ಸೆಯ ಕುಲದಿಂದ ಹನ್ನೆರಡು ಸಾವಿರ


ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು