Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:15 - ಕನ್ನಡ ಸತ್ಯವೇದವು C.L. Bible (BSI)

15 ಯೇಸು ಆಕೆಯ ಕೈಮುಟ್ಟಿದುದೇ ಜ್ವರ ಬಿಟ್ಟುಹೋಯಿತು, ಆಕೆ ಎದ್ದು ಅವರನ್ನು ಸತ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮುಟ್ಟಿದಾಗಲೇ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟುಹೋಯಿತು. ಆಕೆಯು ಎದ್ದು ಅವರನ್ನು ಉಪಚರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ತಿಚೊ ಹಾತ್ ಧರುನ್ ತಿಕಾ ಉಟ್ವುಲ್ಯಾನ್. ತನ್ನಾಚ್ ತಿಚೊ ತಾಪ್ ತಿಕಾ ಸೊಡುನ್ ಗೆಲೊ. ತಿ ಉಟ್ಲಿ ಅನಿ ಜೆಜುಚಿ ಚಾಕ್ರಿ ಕರುಕ್ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:15
15 ತಿಳಿವುಗಳ ಹೋಲಿಕೆ  

ಒಂದು ದಿನ, ಜನರು ಒಬ್ಬ ಸತ್ತವನನ್ನು ಸಮಾಧಿ ಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು, ಶವವನ್ನು ಎಲೀಷನ ಸಮಾಧಿಯಲ್ಲೆ ಬಿಸಾಡಿ ಓಡಿಹೋದರು. ಸತ್ತ ವ್ಯಕ್ತಿಯ ಶವ ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ, ಆ ವ್ಯಕ್ತಿ ಉಜ್ಜೀವಿಸಿ ಎದ್ದುನಿಂತನು.


ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು.


“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.


ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.


ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.


ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,” ಎಂದರು.


ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು.


ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.


ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು.


ತರುವಾಯ ಯೇಸುಸ್ವಾಮಿ ಪೇತ್ರನ ಮನೆಗೆ ಬಂದರು. ಅಲ್ಲಿ ಪೇತ್ರನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.


ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.


ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು