16 ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.
ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.
ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.
ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.
ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.