Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಕುಸ್ಟ್‌ ರೊಗ್‍ ಲಾಗಲ್ಲೊ ಎಕ್ ಮಾನುಸ್ ತೆಚೆಕ್ಡೆ ಯೆಲೊ ಅನಿ ಡೊಗ್ಲಾ ಟೆಕುನ್ “ಧನಿಯಾ, ತಿಯಾ ಮನ್ ಕರ್ಲ್ಯಾರ್, ಮಾಕಾ ಗುನ್ ಕರುಕ್ ಹೊತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:2
37 ತಿಳಿವುಗಳ ಹೋಲಿಕೆ  

ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.


ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು.


ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.


ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿಯನು ಅವನನ್ನು ಎದುರುಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರಮಾಡಿದನು.


“ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು.


ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು.


ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.


ಅಂದು ಯೇಸು ಬೆಥಾನಿಯದಲ್ಲಿ ಕುಷ್ಠರೋಗಿ ಸಿಮೋನನ ಮನೆಯಲ್ಲಿದ್ದರು.


ಆಗ ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು.


ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.


ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.


ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.


ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


“ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ,” ಎಂದಿತು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು.


ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು.


ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು