28 ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.
28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು.
28 ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ.
28 ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.
ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.
“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.