Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:31 - ಕನ್ನಡ ಸತ್ಯವೇದವು C.L. Bible (BSI)

31 “ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ದೆವ್ವಗಳು - ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವದಾದರೆ ಆ ಹಂದಿಯ ಗುಂಪಿನೊಳಗೆ ಕಳುಹಿಸಿಕೊಡು ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಆ ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ನೀನು ನಮ್ಮನ್ನು ಹೊರಗೆ ಹಾಕುವುದಾದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತ್ಯಾ ಗಿರ್‍ಯಾನಿ ಜೆಜುಕ್, “ತಿಯಾ ಅಮ್ಕಾ ಭಾಯ್ರ್ ಕಾಡುಕ್ ಯೆಲೆ ಜಾಲ್ಯಾರ್, ತ್ಯಾ ಡುಕ್ರಾತ್ನಿ ಅಮ್ಕಾ ಧಾಡುನ್ ದಿ.” ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:31
9 ತಿಳಿವುಗಳ ಹೋಲಿಕೆ  

ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪದೂರದಲ್ಲೇ ಮೇಯುತ್ತಿತ್ತು.


ಯೇಸು, “ಹೋಗಿ” ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು