Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:16 - ಕನ್ನಡ ಸತ್ಯವೇದವು C.L. Bible (BSI)

16 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಹಚ್ಚಿದರೆ] ಆ ತ್ಯಾಪೆಯು ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕೊನ್‍ಬಿ ಪಿಂಜಲ್ಲ್ಯಾ ಜುನ್ನ್ಯಾ ಅಂಗಿಕ್ ನ್ಹವ್ಯಾ ಫಾಳಿಚೊ ತುಕ್ಡೊ ಲಾವುನ್ ಶಿವಿನಾ, ತೊ ನ್ಹವೊ ಫಾಳಿಚೊ ತುಕ್ಡೊ ಮುದ್ದೊ ಹೊತಾ, ಅನಿ ತಿ, ಪಿಂಜಲ್ಲಿ ಅಂಗಿ ಅನಿ ಉಲ್ಲಿ ಜಾಸ್ತಿಚಿ ಪಿಂಜ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:16
11 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.


“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.


ಹೀಗೆ ನಿಮ್ಮ ಕೊಡುಗೆ ದೇವಜನರ ಕೊರತೆಗಳನ್ನು ನೀಗಿಸುವುದಲ್ಲದೆ ಅನೇಕರು ದೇವರಿಗೆ ಸ್ತೋತ್ರ ಸಲ್ಲಿಸುವಂತೆ ಮಾಡುವುದು.


ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು