Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:26 - ಕನ್ನಡ ಸತ್ಯವೇದವು C.L. Bible (BSI)

26 ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಈ ಸುದ್ದಿಯು ಸುತ್ತಮುತ್ತಲಿನ ಪ್ರದೇಶದಲ್ಲೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹಿ ಖಬರ್ ತ್ಯಾ ದೆಸಾತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:26
11 ತಿಳಿವುಗಳ ಹೋಲಿಕೆ  

ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.


ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.


ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.


ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.


ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು.


ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.


ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.


ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು