Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:28 - ಕನ್ನಡ ಸತ್ಯವೇದವು C.L. Bible (BSI)

28 ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು - ನಾನು ಇದನ್ನು ಮಾಡಬಲ್ಲೆನೆಂಬದನ್ನು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು - ಹೌದು, ಸ್ವಾಮೀ, ನಂಬುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜು ಥೈ ಘರಾತ್ ಪಾವಲ್ಲ್ಯಾ ತನ್ನಾ ದೊಗೆಬಿ ಕುಡ್ಡೆ ಜೆಜುಕ್ಡೆ ಯೆಲೆ. ಜೆಜುನ್ ತೆಂಕಾ, “ಮಿಯಾ ತುಮ್ಕಾ ದಿಸ್ಟ್ ದಿವ್ಕ್ ಹೊತಾ ಮನುನ್ ತುಮ್ಕಾ ವಿಶ್ವಾಸ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಹೊಯ್ ಧನಿಯಾ,” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:28
14 ತಿಳಿವುಗಳ ಹೋಲಿಕೆ  

ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,


ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.


ತರುವಾಯ ಯೇಸುಸ್ವಾಮಿ ಪೇತ್ರನ ಮನೆಗೆ ಬಂದರು. ಅಲ್ಲಿ ಪೇತ್ರನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.


ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,” ಎಂದರು.


ಅದೇ ದಿನ ಯೇಸುಸ್ವಾಮಿ ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು.


ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,


ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು