35 ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.
35 ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
35 ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
35 ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.
35 ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.
ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.
“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.