Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:36 - ಕನ್ನಡ ಸತ್ಯವೇದವು C.L. Bible (BSI)

36 ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಲೊಕಾಂಚ್ಯಾ ತಾಂಡ್ಯಾಕ್ನಿ ಬಗುನ್, ಜೆಜುಕ್ ತೆಂಚೊ ಪಾಪ್ ದಿಸ್ಲೊ. ಕಶ್ಯಾಕ್ ಮಟ್ಲ್ಯಾರ್, ತಿ ಲೊಕಾ ಬೆಜಾರಾನ್ ಅನಿ ಕಾಯ್ಬಿ ಅದಾರ್ ‍ನಸ್ತಾನಾ ರಾಕ್ವಾಲಿನಸಲ್ಲ್ಯಾ ಬಕ್ರ್ಯಾಂಚ್ಯಾ ಸರ್ಕೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:36
18 ತಿಳಿವುಗಳ ಹೋಲಿಕೆ  

ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.


ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು.


ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ;


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.


“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.


ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು