Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:38 - ಕನ್ನಡ ಸತ್ಯವೇದವು C.L. Bible (BSI)

38 ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತೆಚೆಸಾಟ್ನಿ, ಪಿಕ್ಕಾಚ್ಯಾ ಮಾಲ್ಕಾ ದೆವಾಕ್ಡೆ ತುಜೆ ಪಿಕ್ಕ್ ಭುತ್ತುರ್ ಘಾಲುಕ್ ಕಾಮಾಚಿ ಲೊಕಾ ಧಾಡುನ್ ದಿ ಮನುನ್ ಮಾಗ್ನಿ ಕರಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:38
15 ತಿಳಿವುಗಳ ಹೋಲಿಕೆ  

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.


ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.


ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು