Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:4 - ಕನ್ನಡ ಸತ್ಯವೇದವು C.L. Bible (BSI)

4 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೇಸು ಅವರ ಆಲೋಚನೆಯನ್ನು ತಿಳಿದು - ನೀವು ಯಾಕೆ ನಿಮ್ಮ ಮನಸ್ಸಿನಲ್ಲಿ ಕೆಟ್ಟ ಆಲೋಚನೆಯನ್ನು ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುನ್ ತೆನಿ ಕಾಯ್ ಯವ್ಜುಕ್ ಲಾಗ್ಲ್ಯಾತ್ ಮನುನ್ ಕಳ್ವುನ್ ಘೆಟ್ಲ್ಯಾನ್, ಅನಿ ತೆನಿ ತೆಂಕಾ, “ತುಮಿ ತುಮ್ಚ್ಯಾ ಮನಾತ್ನಿ ಅಶೆ ಚುಕ್ ಕಶ್ಯಾಕ್ ಯೌಜುಲ್ಯಾಸಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:4
24 ತಿಳಿವುಗಳ ಹೋಲಿಕೆ  

ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.


ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.


ಅವರ ಆಲೋಚನೆಗಳನ್ನು ಅರಿತುಕೊಂಡು ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು?


ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)


ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?


ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.


ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?


ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು