Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:5 - ಕನ್ನಡ ಸತ್ಯವೇದವು C.L. Bible (BSI)

5 ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾವದು ಸುಲಭ? ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾವುದು ಸುಲಭ? ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೇ ಅಥವಾ ‘ಮೇಲಕ್ಕೆದ್ದು ನಡೆ’ ಎಂದು ಹೇಳುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ತುಜೆ ಪಾಪ್ ಮಾಪ್ ಹೊಲೆ; ಮನ್ತಲೆ ಸಸಾರ್ ಕಾಯ್? ಉಟ್ ಅನಿ ಚಲ್ ಮನ್ತಲೆ ಸಸಾರ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:5
15 ತಿಳಿವುಗಳ ಹೋಲಿಕೆ  

ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.


ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು