Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:6 - ಕನ್ನಡ ಸತ್ಯವೇದವು C.L. Bible (BSI)

6 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆಜಾಲ್ಯಾರ್ ಹ್ಯಾ ಜಗಾತ್ ಪಾಪ್ ಮಾಪ್ ಕರ್‍ತಲೊ ಅದಿಕಾರ್ ಮಾನ್ಸಾಚ್ಯಾ ಲೆಕಾಕ್ ಹಾಯ್ ಮನ್ತಲೆ ಖರೆ ಕರುನ್ ಮಿಯಾ ತುಮ್ಕಾ ದಾಕ್ವುನ್ ದಿತಾ ಮನುನ್ ಸಾಂಗುನ್, ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, “ವೈರ್ ಉಟ್, ತುಜೆ ಹಾತ್ರಾನ್ ಘೆ, ಅನಿ ತುಜ್ಯಾ ಘರಾಕ್ ಚಲ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:6
24 ತಿಳಿವುಗಳ ಹೋಲಿಕೆ  

‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.


ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ,


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು.


ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು.


ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು