Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:8 - ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆ ಬಗಟಲ್ಲಿ ಲೊಕಾ ಭಿಂಯಾಲಿ, ಅನಿ ಅಸ್ಲೊ ಅದಿಕಾರ್ ದೆವಾನ್ ಮಾನ್ಸಾಕ್ ದಿಲ್ಲ್ಯಾಸಾಟ್ನಿ ದೆವಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:8
22 ತಿಳಿವುಗಳ ಹೋಲಿಕೆ  

ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು.


ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


“ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು.


ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.


ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು.


ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.


ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು