ಮಲಾಕಿ 1:9 - ಕನ್ನಡ ಸತ್ಯವೇದವು C.L. Bible (BSI)9 ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |