Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:10 - ಕನ್ನಡ ಸತ್ಯವೇದವು C.L. Bible (BSI)

10 ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:10
50 ತಿಳಿವುಗಳ ಹೋಲಿಕೆ  

ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಮಾರನೆಯ ದಿನ ಇಬ್ಬರು ಇಸ್ರಯೇಲರೇ ಜಗಳವಾಡುತ್ತಿರುವುದನ್ನು ಕಂಡನು. ಮೋಶೆ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದನು. ಅವರಿಗೆ, ‘ಗೆಳೆಯರೇ, ನೀವು ಸಹೋದರರಲ್ಲವೆ? ಹೀಗೇಕೆ ಕಿತ್ತಾಡುತ್ತಿದ್ದೀರಿ?’ ಎಂದು ಸಮಾಧಾನ ಪಡಿಸಲು ಯತ್ನಿಸಿದನು.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?


“ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು, ಕಾನಾನ್ ನಾಡಿನಲ್ಲೆಲ್ಲಾ ಸಂಚಾರ ಮಾಡಿಸಿದೆ. ಇಸಾಕನೆಂಬ ಮಗನನ್ನು ಕೊಟ್ಟು, ಅವನ ಸಂತಾನವನ್ನು ಹೆಚ್ಚಿಸಿದೆ.


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಅಷ್ಟುಮಾತ್ರವಲ್ಲ, ನಮ್ಮ ಮೂಲಪಿತ ಇಸಾಕನಿಂದ ರೆಬೆಕ್ಕಳಿಗೆ ಅವಳಿಜವಳಿ ಮಕ್ಕಳಾದರು.


ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.


ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.


ಆಗ ಆ ಯೆಹೂದ್ಯರು, ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ I


ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು.


ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು