ಮಲಾಕಿ 2:13 - ಕನ್ನಡ ಸತ್ಯವೇದವು C.L. Bible (BSI)13 ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ. ಅಧ್ಯಾಯವನ್ನು ನೋಡಿ |