Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:17 - ಕನ್ನಡ ಸತ್ಯವೇದವು C.L. Bible (BSI)

17 “ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:17
34 ತಿಳಿವುಗಳ ಹೋಲಿಕೆ  

ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು.


ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.


ನೀನೋ ದುಷ್ಟ ನಿರ್ಣಯಗಳಿಂದ ಭರಿತನಾಗಿರುವೆ ನ್ಯಾಯವಿಚಾರಣೆಗೂ ತೀರ್ಪಿಗೂ ಒಳಪಟ್ಟಿರುವೆ.


ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ಅವನ ಪರಿಶೋಧನೆ ಇನ್ನೂ ಮುಂದುವರೆದರೆ ಒಳಿತು ಅವನು ಕೊಟ್ಟ ಉತ್ತರ ದುರುಳರಿಗೆ ತಕ್ಕುದಾದುದು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


“ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.


ಅಕಟಾ, ಜನರು ನನ್ನನ್ನು ‘ಸರ್ವೇಶ್ವರನ ಮಾತೆಲ್ಲಿ? ಅದು ಈಗಲೇ ನೆರವೇರಲಿ’ ಎಂದು ಮೂದಲಿಸುತ್ತಾರೆ.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು