Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:6 - ಕನ್ನಡ ಸತ್ಯವೇದವು C.L. Bible (BSI)

6 ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅನ್ಯಾಯವೇನೂ ಕಾಣಲಿಲ್ಲ; ಅವರು ಶಾಂತಿಯಿಂದಲೂ ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹುಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಲೇವಿಯು ಸುಳ್ಳನ್ನು ಸಮರ್ಥಿಸದೆ ಸತ್ಯ ಬೋಧನೆಯನ್ನು ಬೋಧಿಸಿದನು. ಅವನು ಪ್ರಮಾಣಿಕನಾಗಿದ್ದು ಸಮಾಧಾನವನ್ನು ಪ್ರೀತಿಸುತ್ತಿದ್ದನು. ಲೇವಿಯು ನನಗೆ ವಿಧೇಯನಾಗಿದ್ದು ಎಷ್ಟೋ ಮಂದಿ ಕೆಟ್ಟದಾರಿಯಲ್ಲಿ ಹೋಗುತ್ತಿರುವವರನ್ನು ನನ್ನ ಶಿಕ್ಷೆಯಿಂದ ಪಾರುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸತ್ಯ ಬೋಧನೆಯು ಅವನ ಬಾಯಲ್ಲಿ ಇತ್ತು. ಸುಳ್ಳು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ, ನ್ಯಾಯದಿಂದಲೂ ನನ್ನ ಸಂಗಡ ನಡೆದುಕೊಂಡು, ಅನೇಕರನ್ನು ಪಾಪದ ಕಡೆಯಿಂದ ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:6
27 ತಿಳಿವುಗಳ ಹೋಲಿಕೆ  

ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.


ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ನಿನ್ನ ನೀತಿ ನಿತ್ಯ I ನಿನ್ನ ಶಾಸ್ತ್ರ ಸತ್ಯ II


ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು