Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:7 - ಕನ್ನಡ ಸತ್ಯವೇದವು C.L. Bible (BSI)

7 ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:7
37 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.


ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ.


ನನ್ನ ಸೇವಕನಿಗಿಂತ ಕುರುಡರು ಯಾರು? ನನ್ನ ದೂತನಿಗಿಂತ ಕಿವುಡರು ಯಾರು? ನನ್ನ ಭಕ್ತನಿಗಿಂತ ಕುರುಡರು ಯಾರು? ಸರ್ವೇಶ್ವರನ ದಾಸನಿಗಿಂತ ಅಂಧಕರು ಯಾರು?


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.


ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.


ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ಹರಕೆಮಾಡಿ ತೀರಿಸದೆ ಇರುವುದಕ್ಕಿಂತ ಹರಕೆ ಮಾಡಿಕೊಳ್ಳದಿರುವುದೇ ಲೇಸು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು