ಮಲಾಕಿ 2:8 - ಕನ್ನಡ ಸತ್ಯವೇದವು C.L. Bible (BSI)8 “ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.