Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:1 - ಕನ್ನಡ ಸತ್ಯವೇದವು C.L. Bible (BSI)

1 ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:1
38 ತಿಳಿವುಗಳ ಹೋಲಿಕೆ  

“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.


ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು