Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:12 - ಕನ್ನಡ ಸತ್ಯವೇದವು C.L. Bible (BSI)

12 ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇತರ ಜನಾಂಗಗಳವರು ನಿಮ್ಮೊಂದಿಗೆ ಸಮಾಧಾನದಿಂದಿರುವರು. ನಿಜವಾಗಿಯೂ ನಿಮ್ಮ ದೇಶವು ಆಗ ಆಶ್ಚರ್ಯಕರವಾದ ದೇಶವಾಗಿರುವುದು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:12
15 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II


ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.


ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.


“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು