Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:14 - ಕನ್ನಡ ಸತ್ಯವೇದವು C.L. Bible (BSI)

14 ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:14
16 ತಿಳಿವುಗಳ ಹೋಲಿಕೆ  

“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ಊಹಿಸುತ್ತೀಯೋ? ನಿನ್ನ ನೀತಿ ದೇವರ ನೀತಿಗಿಂತ ಮಿಗಿಲಾದುದೆನ್ನುತ್ತೀಯೋ?


ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”


ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.


ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.


ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.


“ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.


ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”


“ಆದರೆ ಅವರು, ‘ಇದೆಲ್ಲ ಹೇಳಿ ಏನು ಪ್ರಯೋಜನವಿಲ್ಲ; ನಾವು ನಮ್ಮ ಆಲೋಚನೆ ಪ್ರಕಾರ ನಡೆಯುತ್ತೇವೆ. ನಮ್ಮಲ್ಲಿ ಪ್ರತಿಯೊಬ್ಬರು ನಮ್ಮ ನಮ್ಮ ಹೃದಯದ ಚಟದಂತೆಯೇ ನಡೆಯುತ್ತೇವೆ’ ಎಂದು ಹೇಳುವರು.”


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?


ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು