Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:16 - ಕನ್ನಡ ಸತ್ಯವೇದವು C.L. Bible (BSI)

16 ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:16
64 ತಿಳಿವುಗಳ ಹೋಲಿಕೆ  

ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ I ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ II


ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು.


“ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,


ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಪ್ರಭುವನು ನಾ ಹೊಗಳಿ ಹಾಡುವೆನು ಬಾಳಿನೊಳೆಲ್ಲ I ನನ್ನ ದೇವನನು ಭಜಿಸುವೆನು ನಾ ಜೀವಮಾನವೆಲ್ಲ II


ಆದುದರಿಂದ ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೆಯಿಸಿದನು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II


ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು