Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:2 - ಕನ್ನಡ ಸತ್ಯವೇದವು C.L. Bible (BSI)

2 “ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:2
47 ತಿಳಿವುಗಳ ಹೋಲಿಕೆ  

ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.


ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು.


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.


ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ದಕ್ಕುವುದು ಚೊಕ್ಕ ಒಡವೆ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


“ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು