Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:4 - ಕನ್ನಡ ಸತ್ಯವೇದವು C.L. Bible (BSI)

4 ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೂದದ ಮತ್ತು ಯೆರೂಸಲೇವಿುನ ನೈವೇದ್ಯವು ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾಗಿದ್ದಂತೆ ಆಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜೆರುಸಲೇಮಿನಿಂದಲೂ ಯೆಹೂದದಿಂದಲೂ ಯೆಹೋವನು ಕಾಣಿಕೆಗಳನ್ನು ಸ್ವೀಕರಿಸುವನು. ಹಿಂದಿನ ಕಾಲದಲ್ಲಿದ್ದಂತೆಯೇ ಈಗಲೂ ಆಗುವದು. ಬಹಳ ವರ್ಷಗಳ ಹಿಂದಿನ ಕಥೆಯೇ ಈಗಲೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:4
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II


ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು