Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:5 - ಕನ್ನಡ ಸತ್ಯವೇದವು C.L. Bible (BSI)

5 “ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:5
63 ತಿಳಿವುಗಳ ಹೋಲಿಕೆ  

ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


“ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ I ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, II


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;


ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.


ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.


ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.


ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.


ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.


ಬಿಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.


ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.


ನರಕ ಕೂಪದವರೆಗೆ ಬೆಂಕಿಯಾಗುತ್ತಿತ್ತು ನನ್ನ ಆದಾಯವನ್ನೆಲ್ಲ ನಿರ್ಮೂಲಮಾಡುತ್ತಿತ್ತು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು