Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:1 - ಕನ್ನಡ ಸತ್ಯವೇದವು C.L. Bible (BSI)

1 “ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:1
37 ತಿಳಿವುಗಳ ಹೋಲಿಕೆ  

ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ.


“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.


ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಇಗೋ, ಸರ್ವೇಶ್ವರ ನೇಮಿಸಿದ ದಿನ ಬರುತ್ತಿದೆ. ಆಗ ಜೆರುಸಲೇಮಿನ ಆಸ್ತಿಪಾಸ್ತಿ ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ಅವರ ಕಣ್ಮುಂದೆ ಪಾಲುಪಾಲಾಗುವುದು.


ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ನಿನ್ನೆದುರಾಳಿಗಳನು ಕೆಡವಿಬಿಡುತಿ ಮಹಾ ತೇಜಸ್ವಿಯಾಗಿ ಒಣಹುಲ್ಲಂತೆ ಭಸ್ಮಮಾಡುತಿ ಅವರನು ಕೋಪಾಗ್ನಿಯಾಗಿ.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.


“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ.


ಲೋಕದ ದುರುಳರನ್ನೆಲ್ಲಾ ಕಸದಂತೆ ಪರಿಗಣಿಸುತ್ತೀ I ಎಂತಲೇ, ನಿನ್ನಾ ಕಟ್ಟಳೆಯಲ್ಲಿದೆ ನನಗೆ ಆಸಕ್ತಿ II


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ, ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.


ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು