Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:3 - ಕನ್ನಡ ಸತ್ಯವೇದವು C.L. Bible (BSI)

3 ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:3
22 ತಿಳಿವುಗಳ ಹೋಲಿಕೆ  

ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಅಪಾರ ಅಪರಾಧಗಳಿಂದ, ಅನ್ಯಾಯ ವ್ಯಾಪಾರಗಳಿಂದ ನಿನ್ನಲ್ಲಿನ ಪವಿತ್ರಾಲಯ ಅಶುದ್ಧವಾಯಿತು ನಿನ್ನಿಂದ. ಎಂದೇ, ನಾ ಬರಮಾಡಿದೆ ಬೆಂಕಿಯನು ನಿನ್ನೊಳಗಿಂದ ನೋಡ್ವರೆಲ್ಲರ ಮುಂದೆ ಸುಟ್ಟು ಭಸ್ಮ ಮಾಡಿತು ನಿನ್ನ.


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಅವರನು ಹೊಡೆದೆ ಮತ್ತೆ ಏಳದಂತೆ ಅವರನು ಮಾಡಿದೆ ಕಾಲಿಗೆ ಬೀಳುವಂತೆ.


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು