Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:5 - ಕನ್ನಡ ಸತ್ಯವೇದವು C.L. Bible (BSI)

5 “ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:5
16 ತಿಳಿವುಗಳ ಹೋಲಿಕೆ  

ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಹಾಗಾದರೆ, “ನೀನು ಎಲೀಯನೋ?’ ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?’ ಎಂದು ಅವರು ಮತ್ತೆ ಕೇಳಲು, “ಅದೂ ಅಲ್ಲ” ಎಂದು ಮರುನುಡಿದನು.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು.


ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು