Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:10 - ಕನ್ನಡ ಸತ್ಯವೇದವು C.L. Bible (BSI)

10 ನೀರಿನಿಂದ ಅವರು ಮೇಲಕ್ಕೆ ಬರುತ್ತಿರುವಾಗಲೇ ಆಕಾಶವು ತೆರೆದು, ಪವಿತ್ರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿಯುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದುಬರುತ್ತಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜು ಬಾಲ್ತಿಮ್ ಘೆವ್ನ್ ಪಾನಿಯಾತ್ನಾ ವೈರ್ ಇಬೆ ಹೊತ್ತ್ಯಾ ತನ್ನಾ, ಎಗ್ದಮ್ ಸರ್ಗ ಉಗ್ಡುನ್, ದೆವಾಚೊ ಆತ್ಮೊ ಪಾರಿವಾಳಾಚ್ಯಾ ರುಪಾರ್, ಅಪ್ನಾಚ್ಯಾ ವರ್‍ತಿ ಉತ್ರುನ್ ಯೆತಲೊ ಜೆಜುನ್ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:10
8 ತಿಳಿವುಗಳ ಹೋಲಿಕೆ  

ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು