Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:11 - ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ನೀನೇ ನನ್ನ ಪ್ರಿಯ ಮಗನು. ನಾನು ನಿನ್ನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಸರ್ಗಾವೈನಾ “ತಿಯಾ ಮಾಜೊ ಲೈ ಅಪುರ್‍ಬಾಯೆಚೊ ಲೆಕ್. ಮಾಜ್ಯಾ ಮನಾ ಸರ್ಕೊ” ಮನುನ್ ಮನ್ತಲೊ ಎಕ್ ಧನ್ ಅಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:11
19 ತಿಳಿವುಗಳ ಹೋಲಿಕೆ  

ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ನೀರಿನಿಂದ ಅವರು ಮೇಲಕ್ಕೆ ಬರುತ್ತಿರುವಾಗಲೇ ಆಕಾಶವು ತೆರೆದು, ಪವಿತ್ರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿಯುತ್ತಿರುವುದನ್ನು ಕಂಡರು.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು