Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:13 - ಕನ್ನಡ ಸತ್ಯವೇದವು C.L. Bible (BSI)

13 ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ನಾಲ್ವತ್ತು ದಿವಸ ಅಡವಿಯಲ್ಲಿ ಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಡುವವನಾದನು; ಮತ್ತು ದೇವದೂತರು ಆತನಿಗೆ ಉಪಚಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜು ಚಾಳಿಸ್ ದಿಸಾ, ತ್ಯಾ ಮರುಭುಮಿತ್ ಜಿವಾಕ್ ಅಪಾಯ್ ಕರ್‍ತಲ್ಯಾ ಜನಾವರಾಂಚ್ಯಾ ಮದ್ದಿ ರ್‍ಹಾಲೊ, ಥೈ ಸೈತಾನ್ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್ ಕಸ್ರತ್ ಕರ್‍ತಾ. ಖರೆ, ಸೈತಾನಾಕ್ ಜೆಜುನ್ ಪಾಪ್ ಕರಿ ಸರ್ಕೆ ಕರುಕ್ ಹೊವುಕ್ನಾ. ಮಾನಾ ದೆವಾಚ್ಯಾದುತಾನಿ ಯೆವ್ನ್ ಜೆಜುಚಿ ಸೆವಾ ಚಾಕ್ರಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:13
13 ತಿಳಿವುಗಳ ಹೋಲಿಕೆ  

ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.


ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.


ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು