Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:14 - ಕನ್ನಡ ಸತ್ಯವೇದವು C.L. Bible (BSI)

14 ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುವಾಂವಾಕ್‍ ಬಂಧಿಖಾನ್ಯಾತ್ ಘಾಟಲ್ಲ್ಯಾನಿ, ತನ್ನಾ ಜೆಜು ಗಾಲಿಲಿಯಾಕ್ ಬರಿ ಖಬರ್ ಪರ್‍ಚಾರ್ ಕರುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:14
16 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು


ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.


ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.


ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು