Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:2 - ಕನ್ನಡ ಸತ್ಯವೇದವು C.L. Bible (BSI)

2 “ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ, ಕಳಿಸುವೆನು ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ ಎಂದು ದೇವರೇ ನುಡಿದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ನೀನು ಹೋಗುವ ದಾರಿಯನ್ನು ಅವನು ಸರಿಮಾಡುವನೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಇಸಾಯಿಯಾ ಪ್ರವಾದ್ಯಾನ್ ಲಿವಲ್ಲ್ಯಾಸರ್ಕಿ ಅಸೆ ಚಾಲು ಹೊತಾ. “ದೆವ್ ಮನ್ತಾ ‘ಅಬಕ್!’ ಮಿಯಾ ಮಾಜಿ ಖಬರ್ ಸಾಂಗ್ತಲ್ಯಾಕ್ ತುಜೆನ್ಕಿ ಅದ್ದಿ ಧಾಡುನ್ ದಿತಾ, ಅನಿ ತೊ ತುಜಿ ವಾಟ್ ತಯಾರ್ ಕರ್‍ತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:2
13 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ.


ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I ಅರುಹಿಸಿರುವನು ಇಂತೆಂದು ನಮಗೆ: II


ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.


ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II


ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು